ನವದೆಹಲಿ (ಐಎಎನ್ಎಸ್): ‘ದೆಹಲಿಯಲ್ಲಿ ಪರ್ಯಾಯ ಸರ್ಕಾರ ರಚನೆಯ ಸಾಧ್ಯತೆಯನ್ನು ಪರಿಶೀಲಿಸಲು ಸಿದ್ಧರಿರಲಿಲ್ಲವೇ?’ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಆರ್.ಎಂ. ಲೋಧಾ ನೇತೃತ್ವದ ಪೀಠ ನೋಟಿಸ್ ಜಾರಿ ಮಾಡಿದ್ದು, ಶಾಸನಸಭೆಯಲ್ಲಿರುವ ಬೇರೆ ಪಕ್ಷಗಳು ಪಕ್ಷಾಂತರ ಮಾಡುವ ಸಾಧ್ಯತೆ ಇದ್ದುದ್ದರಿಂದ ದೆಹಲಿ ವಿಧಾನಸಭೆಯನ್ನು ವಿಸರ್ಜಿಸದೇ ಅಮಾನತಿನಲ್ಲಿಡಲಾಯಿತೇ? ಎಂದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಶ್ನಿಸಿದೆ.

ಒಮ್ಮೆ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟಲ್ಲಿ ಅದು ಒಂದು ವರ್ಷ ಕಾಲ ಮುಂದುವರಿಯುತ್ತದೆ ಎಂದು ಅರ್ಜಿದಾರರಾದ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಕೋರ್ಟ್ ತಿಳಿಸಿದೆ. ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಎಎಪಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.