ನವದೆಹಲಿ (ಪಿಟಿಐ): ದೆಹಲಿ ಹೈಕೋರ್ಟ್ ಆವರಣದಲ್ಲಿ ಇತ್ತೀಚೆಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 15ಕ್ಕೆ ಮುಟ್ಟಿದೆ.

ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 58 ವರ್ಷ ವಯಸ್ಸಿನ ರತನ್ ಲಾಲ್ ಎಂಬಾತ ಇಲ್ಲಿನ ರಾಮ್ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ಸಾವನ್ನಪ್ಪಿದ ಎಂದು ವೈದ್ಯರು ತಿಳಿಸಿದ್ದಾರೆ.

ಇವರ ಎರಡು ಕಾಲುಗಳು ಸ್ಫೋಟದಿಂದ ತೀವ್ರವಾಗಿ ಪೆಟ್ಟಾಗಿತ್ತೆಂದು ತಿಳಿಸಿರುವ ವೈದ್ಯರು ಮೃತನಿಗೆ ಹೆಂಡತಿ, ಮೂವರು ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗ ಇದ್ದಾರೆ ಎಂದು ತಿಳಿಸಿದ್ದಾರೆ.

ಶುಕ್ರವಾರವಷ್ಟೇ ತನ್ನ ಹೆಂಡತಿ ಹಾಗೂ ಮಕ್ಕಳನ್ನು ನೋಡಬೇಕೆಂದು ತನ್ನ ಬಯಕೆಯನ್ನು ವ್ಯಕ್ತಪಡಿಸಿದ್ದ ಎಂದು ಅವರು ಹೇಳಿದ್ದಾರೆ.

ಒಟ್ಟಾರೆ 24 ಗಾಯಾಳುಗಳು ದೆಹಲಿಯ ವಿವಿಧ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.