ನವದೆಹಲಿ (ಐಎಎನ್ಎಸ್): ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿ ಪರೀಕ್ಷೆಯ (ಪಿಎಂಇಟಿ) ಫಲಿತಾಂಶವನ್ನು ಜೂನ್ 9ರವರೆಗೆ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಬುಧವಾರ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ನಿರ್ದೇಶನ ನೀಡಿದೆ.
ಮೇ ನಾಲ್ಕರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಹರಿಯಾಣ ಪೊಲೀಸರು ತನಿಖೆ ನಡೆಸುತ್ತಿರುವುದರಿಂದ ಫಲಿತಾಂಶ ತಡೆಹಿಡಿಯುವಂತೆ ಸುಪ್ರೀಂಕೋರ್ಟ್ ಹೇಳಿದೆ.
ಮರು ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಬಗ್ಗೆ ತನಿಖಾ ವರದಿ ಬಂದ ಬಳಿಕ ತೀರ್ಮಾನಿಸಲಾಗುವುದು ಎಂದು ನ್ಯಾಯಮೂರ್ತಿ ಪ್ರಫುಲ್ಲ ಸಿ. ಪಂತ್ ಮತ್ತು ನ್ಯಾಯಮೂರ್ತಿ ಅಮಿತಾವ ರಾಯ್ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.
ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿ ಪರೀಕ್ಷೆಯ ಫಲಿತಾಂಶವನ್ನು ಜೂನ್ 5ರಂದು ಪ್ರಕಟಿಸುವುದಾಗಿ ಸಿಬಿಎಸ್ಇ ಘೋಷಿಸಿತ್ತು.