ನವದೆಹಲಿ (ಪಿಟಿಐ): ಚುನಾವಣೆಯಲ್ಲಿನ ಹಿನ್ನಡೆಯ ಬಗ್ಗೆ ಚರ್ಚಿಸಲು ಸೋನಿಯಾ ಬುಧವಾರ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಅವರನ್ನೆಲ್ಲ ಭೇಟಿ ಮಾಡಿದ ಬಳಿಕ, ಐದು ರಾಜ್ಯಗಳಲ್ಲಿನ ಪಕ್ಷದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳೊಂದಿಗೂ ಚರ್ಚಿಸಿದರು.

ಉತ್ತರ ಪ್ರದೇಶದಲ್ಲಿ ತಾರಾ ಪ್ರಚಾರಕರಾಗಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಸಭೆಯಲ್ಲಿ ಇರಲಿಲ್ಲ. ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್- ಉತ್ತರ ಪ್ರದೇಶ ಉಸ್ತುವಾರಿ, ಚೌಧರಿ ಬೀರೇಂದ್ರ ಸಿಂಗ್- ಉತ್ತಾರಖಂಡದ ಉಸ್ತುವಾರಿ, ಗುಲ್ಷನ್ ಸಿಂಗ್ ಚರಕ್- ಪಂಜಾಬ್ ಉಸ್ತುವಾರಿ, ಜಮೀತ್ ಸಿಂಗ್ ಬ್ರಾರ್- ಗೋವಾ ಉಸ್ತುವಾರಿ, ಲುಯಿಜಿನೊ ಫಲೆರಿಯೊ- ಮಣಿಪುರ ಉಸ್ತುವಾರಿ- ಸಭೆಯಲ್ಲಿ ಹಾಜರಿದ್ದ ಪ್ರಮುಖರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.