ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ವಚ್ಛ ಭಾರತ ಅಭಿಯಾನ ಸಹಕಾರಿ

Last Updated 26 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಆರೋಗ್ಯ ಸಂಬಂಧಿ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ದೇಶದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ‘ಸ್ವಚ್ಛ ಭಾರತ ಅಭಿಯಾನ’ ಸಹಕಾರಿಯಾಗಿದೆ ಎಂದು ಸಚಿವ ಸುರೇಶ್‌ ಪ್ರಭು ಹೇಳಿದರು.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ(ಎಫ್‌ಐಸಿಸಿಐ) ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಪರಿಸರವನ್ನು ಶುದ್ಧವಾಗಿರಿಸಿಕೊಳ್ಳುವ ಬಗ್ಗೆ ಭಾರತೀಯ ಸಂಸ್ಕೃತಿ ಸದಾ ಮುಂದು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅನಿವಾರ್ಯ ಕಾರಣಗಳಿಂದ ಇದು ಸಾಧ್ಯವಾಗುತ್ತಿಲ್ಲ’ ಎಂದು ಅವರು ವಿಷಾದಿಸಿದರು.

ಮಣ್ಣಿನ ಭದ್ರತೆಯ ಬಗ್ಗೆ ಹೇಳಿದ ಸಚಿವರು, ‘ಮಣ್ಣಿನ ಭದ್ರತೆಯು ಆಹಾರ ಭದ್ರತೆಯ ಅತ್ಯಂತ ನಿರ್ಣಾಯಕ ಅಂಶಗಳಲ್ಲಿ ಒಂದಾಗಿದೆ. ಮಾನವ ತ್ಯಾಜ್ಯಗಳನ್ನು ಉಪಯೋಗಿಸಿ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT