ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ

Last Updated 10 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಿಸಿ, ಸಚಿವರ ಖಾತೆಗಳಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಈಗಾಗಲೇ  ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತು ಮಾತುಕತೆ ಆರಂಭವಾಗಿದೆ. ಪ್ರಾತಿನಿಧ್ಯ  ದೊರೆಯದ ಜಾತಿ ಹಾಗೂ ಜಿಲ್ಲೆಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಸ್ತರಣೆ ನಡೆಯಲಿದೆ ಎಂದು  ಗುರುವಾರ ರಾತ್ರಿ ಪತ್ರಕರ್ತರಿಗೆ ತಿಳಿಸಿದರು.

ಸಂಪುಟದಿಂದ ಯಾರನ್ನು ಕೈಬಿಡುವ ಪ್ರಶ್ನೆ ಇಲ್ಲ. ಎಲ್ಲರೂ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದಾರೆ. ಖಾಲಿ ಇರುವ ಸ್ಥಾನಗಳಿಗೆ ಮಾತ್ರ ಹೊಸಬರನ್ನು ನೇಮಕ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಶಾಸಕಾಂಗ ಪಕ್ಷ (ಮುಖ್ಯಮಂತ್ರಿ) ದ ನಾಯಕನ ಬದಲಾವಣೆ ಪ್ರಶ್ನೆ ಇಲ್ಲ. ಬದಲಾವಣೆ ಸಂದರ್ಭ ಏನಿದೆ? ಬದಲಾವಣೆ ಮಾಡಿ ಎಂದು ಯಾರು ಕೇಳಿದ್ದಾರೆ. ಇವೆಲ್ಲ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಗುಲ್ಲು. ಇಂಥ ವದಂತಿ ಹರಡಿ ಅವರು ತೃಪ್ತಿ ಪಟ್ಟುಕೊಳ್ಳಲಿ ಎಂದು ಕುಟುಕಿದರು.

ವಿರೋಧ ಪಕ್ಷಗಳಿಗೆ ಜನ ಪಾಠ ಕಲಿಸಿದ್ದಾರೆ. ಸಾಲದೆಂಬುದಕ್ಕೆ. ಪರಮೇಶ್ವರ್, ಆಸ್ಕರ್, ಪೂಜಾರಿ, ಜಯಚಂದ್ರ ಅವರಿಗೆ ಮಣ್ಣು ಮುಕ್ಕಿಸಿದ್ದಾರೆ. ಇನ್ನಾದರೂ ಅವರು ಪಾಠ ಕಲಿತುಕೊಳ್ಳದಿದ್ದರೆ ಹೇಗೆ ಎಂದು ಛೇಡಿಸಿದರು. ‘ನನ್ನ ದೆಹಲಿ ಭೇಟಿಗೆ ವಿಶೇಷ ಅರ್ಥವಿಲ್ಲ. ಕಳೆದ ವಾರವೇ ಬರಬೇಕಿತ್ತು. ಆದರೆ, ಆಗಲಿಲ್ಲ. ಶುಕ್ರವಾರ ಅಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡುತ್ತೇನೆ. ಅಧ್ಯಕ್ಷ  ಗಡ್ಕರಿ 20ರಂದು ಪಕ್ಷದ ಸಮಾವೇಶಕ್ಕೆ ಬೆಂಗಳೂರಿಗೆ ಧಾವಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT