ನವದೆಹಲಿ (ಏಜೆನ್ಸೀಸ್): ತಮಿಳುನಾಡಿಗೆ ಸ್ವಲ್ಪ ಪ್ರಮಾಣದಲ್ಲಾದರೂ ಕಾವೇರಿ ನೀರು ಬಿಡಲು ಪ್ರಯತ್ನಿಸುವಂತೆ ಕರ್ನಾಟಕಕ್ಕೆ ಸೂಚಿಸಿರುವ ಸುಪ್ರೀಂಕೋರ್ಟ್ ‘ಬದುಕಿ ಬದುಕಲು ಬಿಡಿ’ ಎಂದು ಹೇಳಿದೆ.

ತಮಿಳುನಾಡಿಗೆ ಎಷ್ಟು ಪ್ರಮಾಣದಲ್ಲಿ ನೀರುವ ಬಿಡಲು ಸಾಧ್ಯ ಎಂಬುದನ್ನು ಸೋಮವಾರ ತಿಳಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ.

‘ನೀರಿನ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳು ಸಾಮರಸ್ಯ ಕಾಪಾಡಿಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್ ಹೇಳಿದೆ.

‘ಕರ್ನಾಟಕ ನೀರು ಬಿಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯಲ್ಲಿರಬಹುದು. ಆದರೆ, ತಮಿಳುನಾಡಿನ ಜನರೂ ಬದುಕಬೇಕು. ಹೀಗಾಗಿ ಸ್ವಲ್ಪ ಪ್ರಮಾಣದ ನೀರು ಹಂಚಿಕೊಳ್ಳಲು ಕರ್ನಾಟಕ ಮುಂದಾಗಬೇಕು’ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.