ನಾಮಕ್ಕಲ್, ತಮಿಳುನಾಡು (ಪಿಟಿಐ): ಇಲ್ಲಿನ ಪುದುಚಟ್ಟಿರಾಮ್ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಐವರು ಪ್ರಯಾಣಿಕರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಚಾಲಕ ಬಸ್ ಚಾಲನೆ ಮಾಡುವಾಗ ನಿದ್ರೆಗೆ ಜಾರಿದ್ದರಿಂದ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಬಸ್ ಬೆಂಗಳೂರಿನಿಂದ ತಂಜಾವೂರಿಗೆ ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯಗೊಂಡಿರುವರಲ್ಲಿ ಹನ್ನೊಂದು ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.