ಗುನಾ/ಮಧ್ಯಪ್ರದೇಶ : ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಬಹಿರ್ದೆಸೆಗೆ ಹೋಗಿದ್ದ ಮಹಿಳೆಯ ಫೋಟೊವನ್ನು ಕ್ಲಿಕ್ಕಿಸಿ, ಆಕೆಯ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ವರದಿಯಾಗಿದೆ.
ಗುನಾ ಜಿಲ್ಲೆಯ ಬಿಜೆಪಿಯ ವಿಭಾಗೀಯ ಅಧ್ಯಕ್ಷ ಪ್ರದೀಪ್ ಭಟ್ ಈ ಕೃತ್ಯ ಎಸಗಿದ್ದಾನೆ.
ಈ ಘಟನೆ ಸಂಬಂಧ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದು, ‘ಬಯಲು ಶೌಚಕ್ಕೆ ಹೋದ ಸಂದರ್ಭದಲ್ಲಿ ಫೋಟೊ ತೆಗೆಯುವುದರ ಮೂಲಕ ಕಿರುಕುಳ ನೀಡಿದ್ದಾರೆ’ ಎಂದು ಹೇಳಿದ್ದಾರೆ.
ಮಹಿಳೆಯ ದೂರಿನ ಅನ್ವಯ ಭಾರತೀಯ ದಂಡ ಸಂಹಿತೆ 354ಸಿ (ಲೈಂಗಿಕ ದೌರ್ಜನ್ಯ) ಹಾಗೂ 294(ಅಸಭ್ಯ ವರ್ತನೆ)ರ ಅಡಿಯಲ್ಲಿ ಭಟ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.