ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಣಿ ಕಪ್ಪ ಹಗರಣ ಕುರಿತಂತೆ ಸಮಗ್ರವಾದ ಸಿಬಿಐ ತನಿಖೆ ನಡೆಸಬೇಕಾದ್ದು ಅನಿವಾರ್ಯ ಎಂದು ಸುಪ್ರೀಂಕೋರ್ಟ್ಗೆ ಶುಕ್ರವಾರ ಸಿಇಸಿ ಸಲ್ಲಿಸಿದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇದರಿಂದಾಗಿ ಪುನಃ ಮುಖ್ಯಮಂತ್ರಿ ಹುದ್ದೆಗೇರಲು ತೀವ್ರ ಕರಸತ್ತು ನಡೆಸಿರುವ ಬಿಎಸ್ವೈಗೆ ಮತ್ತೊಂದು ಕಂಟಕ ಎದುರಾದಂತಾಗಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ಸದಸ್ಯರು ಮತ್ತು ಜಿಂದಾಲ್ ಸಮೂಹದ ಸೌತ್ವೆಸ್ಟ್ ಮೈನಿಂಗ್ ಕಂಪನಿ ನಡುವಣ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಹಿರಿಯ ಸಲಹೆಗಾರ ಎಸ್.ಆರ್.ಹಿರೇಮಠ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ನೇತೃತ್ವದ ಪರಿಸರ ಪೀಠದ ಮುಂದೆ ಸಿಇಸಿಯ ಅಧಿಕಾರಿಗಳು ವರದಿಯನ್ನು ಸಲ್ಲಿಸಿದರು.

ಸಿಬಿಐ ತನಿಖೆಗೆ ಸಿಇಸಿ ಶಿಫಾರಸು ಮಾಡಿರುವ ವರದಿ ಸುಪ್ರೀಂಕೋರ್ಟ್ಗೆ ಸಲ್ಲಿಕೆಯಾಗುತ್ತಿದ್ದಂತೆ ಇತ್ತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ~ಸಿಇಸಿ ವರದಿಯೇ ಅಂತಿಮವಲ್ಲ, ನ್ಯಾಯಾಂಗದ ಮೇಲೆ ನನಗೆ ವಿಶ್ವಾಸವಿದೆ. ಈ ಕುರಿತಂತೆ ನಾನು ಸುಪ್ರೀಂಕೋರ್ಟ್ ಮೋರೆ ಹೋಗುತ್ತೇನೆ ~ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.