ನವದೆಹಲಿ (ಪಿಟಿಐ): ಇದೇ ಸೆ.13ರಂದು ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗುಜರಾತ್ನಲ್ಲಿ ಮಾತ್ರ ಗೆಲುವು ಸಾಧಿಸಿದ್ದು ಉತ್ತರ ಪ್ರದೇಶದಲ್ಲಿ ಭಾರೀ ಮುಖಭಂಗ ಅನುಭವಿಸಿದೆ.
ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸಿದ್ದ ವಡೋಧರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಟಿಆರ್ಎಸ್ ಮತ್ತು ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಗೆಲುವಿನ ನಗೆ ಬೀರಿವೆ.
ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ.
ಗುಜರಾತ್ 9 ಸ್ಥಾನಗಳ ಪೈಕಿ ಬಿಜೆಪಿ ಆರು ಸ್ಥಾಗಳಲ್ಲಿ ಗೆಲುವು ಕಂಡಿದ್ದು ಮೂರು ಸ್ಥಾನಗಳನ್ನು ಕಳೆದು ಕೊಂಡಿದೆ. ಕಾಂಗ್ರೆಸ್ 3 ಸ್ಥಾನಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದೆ.