ಪಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ, ರಾಜೀನಾಮೆ ನೀಡಿದ 24 ಗಂಟೆಗಳ ಒಳಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತಾಗಿದೆ.

ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದರು. ಬಿಹಾರದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ನಿತೀಶ್ ಅವರು ಕಳೆದ 12 ವರ್ಷಗಳಲ್ಲಿ 6 ಬಾರಿ ಬಿಹಾರದ ಮುಖ್ಯಮಂತ್ರಿಯಾದಂತಾಗಿದೆ.

ಬುಧವಾರ ಹಠಾತ್ ನಿರ್ಧಾರ ಕೈಗೊಂಡು ಆರ್‌ಜೆಡಿ, ಕಾಂಗ್ರೆಸ್ ಜತೆಗಿನ ಮೈತ್ರಿಕೂಟದಿಂದ ಹೊರಬಂದಿದ್ದ ನಿತೀಶ್ ಅವರು ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದರು. ಆರ್‌ಜೆಡಿ ನಾಯಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಿಂದಾಗಿ ನಿತೀಶ್ ಈ ನಿರ್ಧಾರ ಕೈಗೊಂಡಿದ್ದರು. 2014ರ ಲೋಕಸಭೆ ಚುನಾವಣೆ ಸಂದರ್ಭ ನಿತೀಶ್ ಅವರು ಎನ್‌ಡಿಎ ಜತೆ ಮೈತ್ರಿ ಮುರಿದುಕೊಂಡಿದ್ದರು.

ಪ್ರಮಾಣವಚನ ಸ್ವೀಕಾರ ಸಮಾರಂಭದ ವಿಡಿಯೊವನ್ನು ಎಎನ್‌ಐ ಟ್ವೀಟ್ ಮಾಡಿದೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.