ನವದೆಹಲಿ (ಪಿಟಿಐ): ಗೋಧ್ರಾ ನಂತರದ ಗಲಭೆಗೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಮತ್ತು ಅವರ ಕುಟುಂಬದವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.

ರಕ್ಷಣೆಗಾಗಿ ಭಟ್ ಪತ್ನಿ ಶ್ವೇತಾ ಅವರು ಗೃಹ ಸಚಿವ ಪಿ. ಚಿದಂಬರಂ ಅವರಿಗೆ ಪತ್ರ ಬರೆದು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಈ ಸೂಚನೆ ನೀಡಿದೆ. ಪತ್ರ ಕೈ ಸೇರುತ್ತಿದ್ದಂತೆಯೇ ಗೃಹ ಕಾರ್ಯದರ್ಶಿ ಆರ್.ಕೆ. ಸಿಂಗ್ ದೂರು ಕುರಿತು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು.

`ಭಟ್ ಮತ್ತು ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಗುಜರಾತ್ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ~ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಣ್ಣಾ ಟೀಕೆ (ರಾಳೇಗಣ ಸಿದ್ಧಿ ವರದಿ): ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಂಧಿಸುವ ಮೂಲಕ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ತಪ್ಪು ಎಸಗಿದ್ದಾರೆ ಎಂದು ಅಣ್ಣಾ ಹಜಾರೆ ತಿಳಿಸಿದರು.

`ಭಟ್ ಅವರು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ವಿಷಯ ಕೋರ್ಟ್ ಅಂಗಳದಲ್ಲಿದೆ. ಈ ಸಂದರ್ಭದಲ್ಲಿ ಅವರ ಬಂಧನದ ಅಗತ್ಯವಿರಲಿಲ್ಲ. ಇದು ತಪ್ಪು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.