ನವದೆಹಲಿ (ಪಿಟಿಐ): 2010ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಂಬಂಧಿಸಿದ ಯೋಜನೆಗಳಲ್ಲಿ ನಡೆದ ಅವ್ಯವಹಾರಗಳ ತನಿಖೆ ನಡೆಸಿದ್ದ ಶುಂಗ್ಲು ಸಮಿತಿಯು ಮಾಡಿದ್ದ ಶಿಫಾರಸುಗಳ ಮೇರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿ (ಪಿಎಂಒ) ನಿರಾಕರಿಸಿದೆ.
ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಕಚೇರಿ ಸಮಿತಿಯ ಶಿಫಾರಸುಗಳನ್ನು ವಿಶೇಷಾಧಿಕಾರದ ಸಚಿವರ ತಂಡ ನಡೆಸಿದ್ದು, ಅದು ಮಾಹಿತಿ ಹಕ್ಕು ಕಾಯ್ದೆಯಿಂದ ವಿನಾಯಿತಿ ಪಡೆದಿದೆ ಎಂದು ಹೇಳಿದೆ.