ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆ ಶನಿವಾರ ನಡೆದ ಮೊದಲ ಹಂತದ ಮತದಾನದಲ್ಲಿ ಶೇಕಡ 64ರಷ್ಟು ಜನ ಹಕ್ಕು ಚಲಾಯಿಸಿದ್ದಾರೆ.
73 ಸ್ಥಾನಗಳಿಗೆ ಮತದಾನ ನಡೆದಿದೆ. ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿತ್ತು ಎಂದು ಚುನಾವಣಾ ಆಯೋಗ ತಿಳಿಸಿದೆ.

ಕೆಲವು ಮತಗಟ್ಟೆಗಳಲ್ಲಿ ಕಲ್ಲುತೂರಾಟ, ಘರ್ಷಣೆ ನಡೆದ ವರದಿಯಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಟಿ. ವೆಂಕಟೇಶ್ ಹೇಳಿದರು.
2012ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಒಟ್ಟು ಶೇಕಡ 61ರಷ್ಟು ಮತದಾನ ನಡೆದಿತ್ತು.

ಒಂದು ಸಮುದಾಯಕ್ಕೆ ಸೇರಿದ ಜನ ಇನ್ನೊಂದು ಸಮುದಾಯದವರಿಗೆ ಮತ ಚಲಾಯಿಸಲು ಅವಕಾಶ ನೀಡುತ್ತಿಲ್ಲ ಎಂಬ ಕಾರಣಕ್ಕೆ ಬಾಘ್‌ಪತ್‌ನ ಬಘು ಕಾಲನಿಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ ವರದಿಯಾಗಿದೆ.

ಬಾಘ್‌ಪತ್‌ನಲ್ಲಿ ಇನ್ನೊಂದೆಡೆ, ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕದಳ ಪಕ್ಷದ ಕಾರ್ಯಕರ್ತರು ದಲಿತರಿಗೆ ಮತ ಚಲಾಯಿಸಲು ಅಡ್ಡಿಪಡಿಸಿದರು ಎಂಬ ಕಾರಣಕ್ಕೆ ಘರ್ಷಣೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೀರತ್‌ನಲ್ಲಿ ಮತಗಟ್ಟೆಯೊಳಗೆ ಪಿಸ್ತೂಲ್ ಒಯ್ದ ಆರೋಪದ ಅಡಿ ಬಿಜೆಪಿಯ ವಿವಾದಿತ ನಾಯಕ ಸಂಗೀತ್ ಸೋಮ್ ಅವರ ಸಹೋದರ ಗಗನ್ ಸೋಮ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ
ಲಖನೌ: ಉತ್ತರ ಪ್ರದೇಶದ 300 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿರುವ ಸಮಾಜವಾದಿ ಪಕ್ಷ (ಎಸ್‌ಪಿ) – ಕಾಂಗ್ರೆಸ್ ಮೈತ್ರಿಕೂಟವು, ಸಾಮಾನ್ಯ ಕನಿಷ್ಠ ಕಾರ್ಯಸೂಚಿಯನ್ನು ಶನಿವಾರ ಬಿಡುಗಡೆ ಮಾಡಿದೆ.

*ಯುವಕರಿಗೆ ಉಚಿತ ಸ್ಮಾರ್ಟ್‌ಫೋನ್
*20 ಲಕ್ಷ ಯುವಕರಿಗೆ ಉದ್ಯೋಗ ಖಾತರಿ
*ಬೆಳೆಗೆ ಸೂಕ್ತ ಬೆಲೆ
*ಒಂದು ಕೋಟಿ ಬಡ ಕುಟುಂಬಗಳಿಗೆ ತಲಾ ₹ 1,000 ಪಿಂಚಣಿ
*ನಗರ ಪ್ರದೇಶಗಳ ಬಡವರಿಗೆ
₹ 10ಕ್ಕೆ ಒಂದು ಹೊತ್ತಿನ ಊಟ
*ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ
*ದಲಿತ ಮತ್ತು ಹಿಂದುಳಿದ ವರ್ಗಗಳ 10 ಲಕ್ಷ ಬಡ ಕುಟುಂಬಗಳಿಗೆ ಉಚಿತ ಮನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.