ಅಹಮದಾಬಾದ್ (ಪಿಟಿಐ): ಲೋಕಸಭೆ ಚುನಾವಣಾ ಪ್ರಚಾರದ ವೇಳೆ ನರೇಂದ್ರ ಮೋದಿ ಅವರ ವಿರುದ್ಧ ದಾಖಲಿಸಲಾಗಿದ್ದ ಜನಪ್ರತಿನಿಧಿ ಕಾಯ್ದೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಗುಜರಾತ್ ಪೊಲೀಸರಿಗೆ ಸ್ಥಳೀಯ ನ್ಯಾಯಾಲಯ ಶನಿವಾರ ಸೂಚಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂ.ಎಂ. ಷೇಕ್ ಅವರು ಆ.5ರ ಒಳಗೆ ವರದಿ ನೀಡುವಂತೆ ಗುಜರಾತ್ ಅಪರಾಧ ವಿಭಾಗ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಏ. 30 ರಂದು ಗುಜರಾತ್ನಲ್ಲಿ 26 ಕ್ಷೇತ್ರಗಳ ಮತದಾನ ಪ್ರಕ್ರಿಯೆ ನಂತರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಮೋದಿ ಅವರು ಪಕ್ಷ ಚಿನ್ಹೆಯನ್ನು ಕೈಸನ್ನೆ ಮೂಲಕ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ನಿರ್ದೇಶನದ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಮೋದಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.