ನವದೆಹಲಿ: ಗೋವಾದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದ ತನಿಖೆ ಮಾಡುತ್ತಿರುವ ಸಿಬಿಐಗೆ ಜನರಿಂದ ಸಂಗ್ರಹಿಸಿರುವ ಬಯೊಮೆಟ್ರಿಕ್ ದತ್ತಾಂಶಗಳನ್ನು ಒದಗಿಸಬೇಕು ಎಂದು ಬಾಂಬೆ ಹೈಕೋರ್ಟ್ ಪಣಜಿ ಪೀಠವು ಹೊರಡಿಸಿರುವ ಆಜ್ಞೆಯ ವಿರುದ್ಧ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಐಎ)ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಬಾಂಬೈ ಹೈಕೋರ್ಟ್ನ ಪಣಜಿ ಪೀಠವು ಕಳೆದ ಫೆಬ್ರುವರಿ 26ರಂದು ಮಧ್ಯಂತರ ಆದೇಶ ಹೊರಡಿಸಿ ಯುಐಡಿಐಎ ಸಂಗ್ರಹಿಸಿರುವ ಎಲೆಕ್ಟ್ರಾನಿಕ್ ಬೆರಳಚ್ಚು ತಾಳೆಯಾಗುತ್ತದೆಯೇ ಎಂಬುದನ್ನು ಪತ್ತೆಹಚ್ಚಲು ತಜ್ಞರನ್ನು ನೇಮಕ ಮಾಡುವಂತೆ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ಮಹಾ ನಿರ್ದೇಶಕರಿಗೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಯುಐಡಿಐಎ ವಿಶೇಷ ಮೇಲ್ಮನವಿಯನ್ನು ಸಲ್ಲಿಸಿ, ಪಣಜಿ ಪೀಠದ ಆದೇಶವನ್ನು ಪಾಲಿಸಿದರೆ ಪೊಲೀಸ್ ಸೇರಿದಂತೆ ಇತರ ತನಿಖಾ ಸಂಸ್ಥೆಗಳೂ ದತ್ತಾಂಶವನ್ನು ನೀಡುವಂತೆ ಕೋರುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದೆ.

ನಾಗರಿಕರ ವೈಯಕ್ತಿಕ ಮಾಹಿತಿಗಳನ್ನು ಅವರ ಅನುಮತಿ ಇಲ್ಲದೆ ಈ ರೀತಿ ಹಂಚಿಕೊಳ್ಳಲು ಪ್ರಸಕ್ತ ನೀತಿಯಲ್ಲಿ ಅವಕಾಶವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಡೆಮೊಗ್ರಾಫಿಕ್ ಮತ್ತು ಬಯೋಮೆಟ್ರಿಕ್ ಮಾಹಿತಿಗಳನ್ನು ನೀಡುವ ಮೂಲಕ ಈಗಾಗಲೇ 60 ಕೋಟಿ ನಾಗರಿಕರು ಆಧಾರ ಗುರುತಿನ ಚೀಟಿ ಪಡೆದಿದ್ದಾರೆ. ಅವರ ವೈಯಕ್ತಿಕ ಮಾಹಿತಿಗಳನ್ನು ಬಹಿರಂಗಪಡಿಸುವುದು ಅಪಾಯಕಾರಿ ಮತ್ತು ಮೂಲಭೂತ ಹಕ್ಕಿಗೆ ಧಕ್ಕೆ ಉಂಟು ಮಾಡಿದಂತೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಖಾಸಗಿತನದ ಹಕ್ಕು ಮೂಲಭೂತ ಮಾನವ ಹಕ್ಕುಗಳಲ್ಲಿ ಒಂದು. ಈ ಹಕ್ಕನ್ನು ರಕ್ಷಿಸುವುದು ಯುಐಡಿಐಎ ಕರ್ತವ್ಯ. ಆದ್ದರಿಂದ ದತ್ತಾಂಶವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ. ಎಸ್. ಪುಟ್ಟಸ್ವಾಮಿ ಸೇರಿದಂತೆ ಅನೇಕರು ಈಗಾಗಲೇ ಯುಐಡಿಐಎ ದತ್ತಾಂಶ ಸಂಗ್ರಹದ ಔಚಿತ್ಯವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.