ಲಖನೌ (ಪಿಟಿಐ): ಯುಪಿಎ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಸಮಾಜವಾದಿ ಪಕ್ಷ, ಕೇಂದ್ರದೊಂದಿಗೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಈ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಂತೆ ಆಗಿದೆ.

ಸಂಸತ್ನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಪಕ್ಷ ತಂದಿದ್ದ ತಿದ್ದುಪಡಿಯನ್ನು ಹಿಂತೆಗೆದುಕೊಂಡ ಕೆಲವೇ ಸಮಯದಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಸಂಸತ್ನಲ್ಲಿ ತಮ್ಮ ಪಕ್ಷ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ಗೆ ಬಾಹ್ಯ ಬೆಂಬಲ ನೀಡಿರುವುದಾಗಿ ಮುಲಾಯಂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.