ಕೊಜಿಕೊಡ್ (ಕೇರಳ), (ಐಎಎನ್ಎಸ್): ಮಲಯಾಳಂ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಜಗತಿ ಶ್ರೀಕುಮಾರ್ (62) ಅವರು ಶನಿವಾರ ಮುಂಜಾನೆ ಇಲ್ಲಿನ ವಿಶ್ವವಿದ್ಯಾಲಯದ ಆವರಣದಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಕುಮಾರ್ ಅವರು ಇಂದು ಮುಂಜಾನೆ 4.30 ವೇಳೆ ತಮ್ಮ ಇನ್ನೋವಾ ಕಾರಿನಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಹೋಗುತ್ತಿರುವಾಗ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆತ ಸ್ಥಳದಿಂದ ತಪ್ಪಿಸಿಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

`ಶ್ರೀಕುಮಾರ್ ಅವರಿಗೆ ಕುತ್ತಿಗೆ, ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಅವರಿಗೆ ಸದ್ಯ ಕೃತಕ ಉಸಿರಾಟವನ್ನು ಒದಗಿಸಲಾಗಿದೆ. ಅಗತ್ಯವಿದ್ದಲ್ಲಿ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುವುದು~ ಎಂದು ಅವರನ್ನು ನೋಡಿಕೊಳ್ಳುತ್ತಿರುವ 10 ಜನ ವ್ಯೆದ್ಯರ ತಂಡದ ಮುಖ್ಯ ವ್ಯೆದ್ಯಾಧಿಕಾರಿ ವೇಣುಗೋಪಾಲ್ ಅವರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಜಗತಿ ಶ್ರೀಕುಮಾರ್ ಅವರು ಸಾವಿರಕ್ಕೂ ಅಧಿಕ ಮಲಯಾಳಂ ಚಿತ್ರಗಳಲ್ಲಿ ನಟಿಸಿ, ಮನೆ ಮಾತಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.