ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಗಣ್ಯರು ಅವರ ಸ್ಮರಣೆ ಮಾಡಿ, ಗೌರವ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್ ವಾದ್ರಾ ಸೇರಿದಂತೆ ಕುಟುಂಬಸ್ಥರು ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಸಮಾಧಿ ಸ್ಥಳ ‘ವೀರ ಭೂಮಿ’ಗೆ ತೆರಳಿ ಗೌರವ ನಮನ ಸಲ್ಲಿಸಿದರು.
Congress President Sonia Gandhi pays tribute to her husband late Shri Rajiv Gandhiji, our former PM, on his birth anniversary at Veer Bhumi pic.twitter.com/BkO0NQ1jXi