ನವದೆಹಲಿ: ಇಂದು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪುಣ್ಯ ತಿಥಿ. ಆದರೆ ಅವರ ಸಾವು ಇನ್ನು ಕೂಡ ಚಿದಂಬರ ರಹಸ್ಯವಾಗಿಯೇ ಉಳಿದಿದೆ.
ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪ್ರಾಮಾಣಿಕ ಹಾಗೂ ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದರು. ಇವರ ಅನುಮಾನಾಸ್ಪದ ಸಾವು ಇನ್ನು ನಿಗೂಢವಾಗಿಯೇ ಉಳಿದಿದೆ.

ತಾಷ್ಕೆಂಟ್ ನಲ್ಲಿ ಸಾವು
ಪಾಕಿಸ್ತಾನ ವಿರುದ್ಧದ ಎರಡನೇ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ವೇಳೆ ಉಪಖಂಡದಲ್ಲಿ ಶಾಂತಿ ಸ್ಥಾಪಿಸುವ ಸಲುವಾಗಿ ರಷ್ಯಾದ ತಾಷ್ಕೆಂಟ್‌ನಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು.
ಪಾಕಿಸ್ತಾನದ ಅಂದಿನ ಅಧ್ಯಕ್ಷರಾದ ಆಯೂಬ್ ಖಾನ್ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಈ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದರು.

ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ಗಂಟೆಗಳಲ್ಲಿ ಶಾಸ್ತ್ರಿ ಸಾವು
ಶಾಂತಿ ಒಪ್ಪಂದಕ್ಕೆ ಉಭಯ ದೇಶಗಳ ನಾಯಕರು ರಷ್ಯಾದ ಮಧ್ಯಸ್ಥಿಕೆಯಲ್ಲಿ ಸಹಿ ಹಾಕಿದ್ದರು. ಶಾಸ್ತ್ರಿ ಅವರು ಸಹಿ ಹಾಕಿದ ಗಂಟೆಯಲ್ಲೇ ಹೃದಯಾಘಾತದಿಂದ ಸಾವನ್ನಪಿದ್ದರು.

ರಷ್ಯಾ ವೈದ್ಯರು ಕೂಡ ಶಾಸ್ತ್ರಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದರು.

ಶಾಸ್ತ್ರಿ ದೇಹದಲ್ಲಿತ್ತು ವಿಷ?
2009ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಕುಟುಂಬದ ನಿಕಟವರ್ತಿಯಾಗಿದ್ದ ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ಅವರು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ವಿಷ ನೀಡಲಾಗಿತ್ತು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದರು.

ಅಧಿಕೃತ ದಾಖಲೆಗಳಲ್ಲಿ
ಅಧಿಕೃತ ದಾಖಲೆಗಳಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದೇ ದಾಖಲಾಗಿದೆ.

ಶಾಸ್ತ್ರಿ ಅವರ ಸಾವಿನ ಸುದ್ದಿ ಕೇಳಿ ಇಡೀ ದೇಶವೇ ದಿಗ್ಭ್ರಮೆಗೆ ಒಳಗಾಗಿತ್ತು. ತಾಷ್ಕೆಂಟ್‌ನಲ್ಲಿ ಏನೋ ನಡೆದಿರಬಹುದು ಎಂಬ ಅನುಮಾನ ಅಂದಿನ ದಿನಪತ್ರಿಕೆಗಳಲ್ಲಿ ವ್ಯಕ್ತವಾಗಿತ್ತು. ಶಾಸ್ತ್ರಿ ಅವರ ಮರಣೋತ್ತರ ಪರೀಕ್ಷೆಯ ದಾಖಲೆಗಳು ಸಮರ್ಪಕವಾಗಿಲ್ಲ ಎಂದು ಶಾಸ್ತ್ರಿ ಕುಟುಂಬದವರು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.