ಭೋಪಾಲ್ (ಪಿಟಿಐ): ಸಚಿವರ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಹಣ ನೀಡುವಂತೆ ಒತ್ತಾಯಿಸಿ ದೂರವಾಣಿ ಕರೆ ಮಾಡುತ್ತಿದ್ದ ಆರೋಪಿಯನ್ನು ಮಧ್ಯ ಪ್ರದೇಶದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಂಗದ ಯಾದವ್ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗೆ ಗೃಹ ಸಚಿವ ನಾರಾಯಣ್ ಸಿಂಗ್ ಕುಶ್ವಾಹ ಎಂದು ಹೇಳಿಕೊಂಡು ಎಂಜಿನಿಯರ್ ಒಬ್ಬರಿಗೆ ರೂ 1 ಲಕ್ಷ ನೀಡುವಂತೆ ಒತ್ತಾಯಿಸಿ ಕರೆ ಮಾಡಿದ್ದ. ತಮ್ಮ ಹೆಸರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸಚಿವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ದೂರವಾಣಿ ಕರೆ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.