ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ರಚನೆ: ವೀಕ್ಷಕರ ನೇಮಕ

Last Updated 24 ಡಿಸೆಂಬರ್ 2014, 19:34 IST
ಅಕ್ಷರ ಗಾತ್ರ

ನವದೆಹಲಿ: ಯಾವ ಪಕ್ಷಕ್ಕೂ ಬಹುಮತ ಸಿಗದೆ ಅತಂತ್ರವಾಗಿರುವ ಜಮ್ಮು–ಕಾಶ್ಮೀರ­ದಲ್ಲಿ ಎಲ್ಲ ಆಯ್ಕೆಗಳನ್ನು ಮುಕ್ತವಾಗಿ ಇಟ್ಟುಕೊಂಡಿರುವ ಬಿಜೆಪಿ, ಸರ್ಕಾರ ರಚನೆ ಸಾಧ್ಯತೆ  ಕುರಿತು ಪರಿಶೀಲಿಸಲು ಬುಧವಾರ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ನೇತೃತ್ವದಲ್ಲಿ ಇಬ್ಬರು ಹಿರಿಯ ನಾಯಕರ ಸಮಿತಿ ರಚಿಸಿದೆ.

ಜಮ್ಮು– ಕಾಶ್ಮೀರ ಹಾಗೂ ಜಾರ್ಖಂಡ್‌ ವಿಧಾನಸಭೆ ಫಲಿತಾಂಶ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಅವರ ಸಮ್ಮುಖದಲ್ಲಿ ಸೇರಿದ್ದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಉಭಯ ರಾಜ್ಯಗಳಲ್ಲೂ ಪಕ್ಷದ ಸಾಧನೆ ಕುರಿತು ಸಭೆ ತೃಪ್ತಿ ವ್ಯಕ್ತಪಡಿಸಿತು.

ಅರುಣ್ ಜೇಟ್ಲಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಕಣಿವೆಗೆ ವೀಕ್ಷಕರಾಗಿ ತೆರಳುವರು. ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸರ್ಕಾರ ರಚನೆ ಕುರಿತು ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಜತೆ ಮಾತುಕತೆ ನಡೆಸುವರು. ಜಾರ್ಖಂಡ್‌ಗೆ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಬಿಜೆಪಿ ಉಪಾಧ್ಯಕ್ಷ ವಿನಯ ಸಹಸ್ರಬುದ್ಧೆ ಅವರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರದಲ್ಲಿ ಭಾಗಿ-ಯಾಗಲು ಬಿಜೆಪಿ ಬಯಸಿದೆ. ಎಲ್ಲ ಆಯ್ಕೆಗಳನ್ನು ಪಕ್ಷ ಮುಕ್ತವಾಗಿ ಇಟ್ಟುಕೊಂಡಿದೆ. ಮೂರ್ನಾಲ್ಕು ದಿನಗಳಲ್ಲಿ ವೀಕ್ಷಕರು ಎರಡೂ ರಾಜ್ಯಗಳಿಗೆ ಹೋಗಲಿದ್ದಾರೆ. ವರ್ಷದ ಅಂತ್ಯದೊಳಗೆ ಎರಡೂ ಕಡೆ ಸರ್ಕಾರ ರಚನೆ ಆಗಲಿದೆ ಎಂದು ನಡ್ಡಾ ಸಂಸದೀಯ ಮಂಡಳಿ ಸಭೆ ಬಳಿಕ ಪತ್ರಕರ್ತರಿಗೆ ತಿಳಿಸಿದರು. 

ಕಣಿವೆ ರಾಜ್ಯದಲ್ಲಿ ಬಿಜೆಪಿ ಅತ್ಯಧಿಕ ಮತ ಗಳಿಸಿದೆ. ಜನ ಮೋದಿ ಅವರ ‘ಅಭಿವೃದ್ಧಿ ಕಾರ್ಯಸೂಚಿ’ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಚಿವರಾದ ರಾಜನಾಥ್‌ ಸಿಂಗ್‌, ಅರುಣ್‌ ಜೇಟ್ಲಿ, ವೆಂಕಯ್ಯ ನಾಯ್ಡು, ಸುಷ್ಮಾ ಸ್ವರಾಜ್‌, ನಿತಿನ್‌ ಗಡ್ಕರಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT