ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ವಿರುದ್ಧದ ನೈಸ್ ಅರ್ಜಿ ವಜಾ

Last Updated 13 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ: `ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್~ (ಬಿಎಂಐಸಿ) ಯೋಜನೆ ಕೈಗೆತ್ತಿಕೊಂಡಿರುವ `ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್~(ನೈಸ್)ಗೆ 41ಕಿ.ಮೀ ಉಪ ರಸ್ತೆಗಳನ್ನು ನಿರ್ಮಿಸಲು ಏಳು ಎಕರೆ ಜಮೀನು ನೀಡಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ `ನ್ಯಾಯಾಲಯ ನಿಂದನೆ ಪ್ರಕ್ರಿಯೆ~ ಆರಂಭಿಸಬೇಕೆಂದು ಮನವಿ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿತು.

`ಬಿಎಂಐಸಿ~ ಯೋಜನೆಯನ್ನು ಸಾಧ್ಯವಾದಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸುಪ್ರೀಂಕೋರ್ಟ್ ಹೋದ ವರ್ಷ ಫೆಬ್ರುವರಿ 2ರಂದು ಆದೇಶ ನೀಡಿದ್ದರೂ ರಾಜ್ಯ ಸರ್ಕಾರ ಭೂಮಿ ಕೊಡದೆ  ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶಕ್ಕೆ ಅಗೌರವ ತೋರಿದೆ ಎಂಬ ನೈಸ್ ಕಂಪೆನಿ ವಾದವನ್ನು ನ್ಯಾ.ಜಿ.ಎಸ್.ಸಿಂಘ್ವಿ ಹಾಗೂ ನ್ಯಾ.ಮುಖೋಪಾಧ್ಯಾಯ ಅವರನ್ನು ಒಳಗೊಂಡಿರುವ ಪೀಠ ತಿರಸ್ಕರಿಸಿತು.

ಈ ವಿಷಯದಲ್ಲಿ ನ್ಯಾಯಾಲಯ ನಿಂದನೆ ಮಾಡಿದ ಸಂದರ್ಭಗಳು ಕಾಣುತ್ತಿಲ್ಲ. ಆದರೆ, ಫೆಬ್ರುವರಿ 2ರ ಆದೇಶ ಜಾರಿಯಲ್ಲಿದೆ ಎಂದು ರಾಜ್ಯಕ್ಕೆ ಮತ್ತೆ ಹೇಳುವ ಅಗತ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.
`ನೈಸ್~ ಪರ ಹಾಜರಾದ ಹಿರಿಯ ವಕೀಲ ದುಶ್ಯಂತ್ ದವೆ, ಬೆಂಗಳೂರು ಉತ್ತರ ತಾಲ್ಲೂಕಿನ ತೋಟದಗುಡ್ಡದಹಳ್ಳಿ ಮತ್ತು ದಾಸನಪುರದಲ್ಲಿ 3.19 ಹಾಗೂ 4.3 ಎಕರೆ ಭೂಮಿಯನ್ನು ಸರ್ಕಾರ ಕಂಪೆನಿಗೆ ಹಸ್ತಾಂತರ ಮಾಡಿಲ್ಲ ಎಂದು ಆರೋಪಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT