ಚಂಡೀಗಡ: ಹರಿಯಾಣದ ಮೇವತ್‌ನಲ್ಲಿ 8 ಮಂದಿ ಕಾಮಾಂಧರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ 17 ವರ್ಷದ ಬಾಲಕಿ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದಾಗ ಎರಡು ಬೈಕ್ ಮತ್ತು ಒಂದು ಕಾರಿನಲ್ಲಿ ಬಂದಿದ್ದ ಆರೋಪಿಗಳು ಆಕೆಯನ್ನು ಅಪಹರಿಸಿದ್ದರು. ನಂತರ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು. ನುಹ್ ಜಿಲ್ಲೆಯ ನಿರ್ಜನ ಪ್ರದೇಶವೊಂದರಲ್ಲಿ ಸೋಮವಾರ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

‘ಅಪಹರಣ, ಸಾಮೂಹಿಕ ಅತ್ಯಾಚಾರ, ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಲು ಶೋಧ ನಡೆಸುತ್ತಿದ್ದೇವೆ’ ಎಂದು ರೋಜ್ಕೊ ಮಯೊ ಪೊಲೀಸ್ ಠಾಣೆ ಅಧಿಕಾರಿ ಜೈ ಭಗವಾನ್ ತಿಳಿಸಿದ್ದಾರೆ. ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಮೇವತ್ ಪೊಲೀಸ್ ವರಿಷ್ಠಾಧಿಕಾರಿ ನಜನೀನ್ ಭಾಸಿನ್ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.