ಈ ವರ್ಷ ಒಟ್ಟು 16 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದರು. ದೆಹಲಿ ಮತ್ತು ಜಾರ್ಖಂಡ್ಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶದಾದ್ಯಂತ ದೊಡ್ಡ ಸುದ್ದಿಯಾಗಿತ್ತು. ‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗಣಿತದ ಮರುಪರೀಕ್ಷೆ ನಡೆಸುವುದಿಲ್ಲ’ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಘೋಷಿಸಿತ್ತು.