ಸೂರತ್ (ಪಿಟಿಐ): ಇಲ್ಲಿನ ಪಂದೇಸರ ಪ್ರದೇಶದಲ್ಲಿರುವ ಎಂಬ್ರಾಯಿಡರಿ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 30 ಜನ ಗಾಯಗೊಂಡಿದ್ದಾರೆ. ಅವರಲ್ಲಿ ಹತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ.
ಗ್ಯಾಸ್ ಸಿಲಿಂಡರ್ ಸೋರಿಕೆ ಅಥವಾ ಗೋದಾಮಿನಲ್ಲಿ ಟ್ರಾನ್ಸ್ಫಾರ್ಮರ್ ಇಟ್ಟಿದ್ದುದ್ದೇ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಅಗ್ನಿ ಶಾಮಕದಳದ ಅಧಿಕಾರಿಗಳು ಶಂಕಿಸಿದ್ದಾರೆ.