ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಶನಿವಾರ ಉಗ್ರರು ಸೇನಾ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ಇಬ್ಬರು ಯೋಧರು ಮೃತಪಟ್ಟಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಲೋನ ಮುಂಡಾದ ಬಳಿಯ ಕ್ವಾಜಿಗುಂಡ ಪ್ರದೇಶದಲ್ಲಿ ಉಗ್ರರು ಸೇನಾ ಬೆಂಗಾವಲು ಪಡೆಯ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಸಾವಿಗೀಡಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಪಡೆ ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ಭೇಟೆಗಾಗಿ ಸೇನೆ ಶೋಧ ನಡೆಸಿದೆ.
J&K: 1 Army personnel lost his life & 4 injured in attack by terrorists on Army convoy that took place in Qazigund (visuals deferred) pic.twitter.com/CDb2cJkCmf