ನವದೆಹಲಿ: ಅನಾರೋಗ್ಯದ ಕಾರಣ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದಾರೆ.
ಸೋನಿಯಾ ಗಾಂಧಿ ಅವರು ಹೊಟ್ಟೆ ನೋವಿನಿಂದ ಚೇತರಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಗುಣಮುಖರಾಗಿರುವ ಸೋನಿಯಾ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
Sonia Gandhi recovered from upset stomach, discharged at 4 pm today. Condition stable, rest advised: Sir Ganga Ram Hospital #Delhi