ನವದೆಹಲಿ (ಪಿಟಿಐ): ಶಸ್ತ್ರಚಿಕಿತ್ಸೆಗಾಗಿ ಕಳೆದ ತಿಂಗಳು ಅಮೆರಿಕಕ್ಕೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಇಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸುವ ಮೂಲಕ ಬಹಿರಂಗವಾಗಿ ಕಾಣಿಸಿಕೊಂಡರು.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಸೋನಿಯಾ ನಿವಾಸದಲ್ಲಿ ಸುಮಾರು 65 ನಿಮಿಷಗಳ ಕಾಲ ಈ ಸಭೆ ನಡೆಯಿತು. ಒಟ್ಟು 90 ಅಭ್ಯರ್ಥಿಗಳ ಹೆಸರನ್ನು ಚರ್ಚಿಸಿ, 70 ಮಂದಿಯನ್ನು ಸಭೆಯಲ್ಲಿ ಅಂತಿಮಗೊಳಿಸಲಾಯಿತು.
ಸಭೆಯ ಬಳಿಕ ತಮ್ಮನ್ನು ಭೇಟಿಯಾದ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೂ ಸೋನಿಯಾ ಸಮಾಲೋಚಿಸಿದರು.