ಹರಿದ್ವಾರ (ಪಿಟಿಐ): ಇಲ್ಲಿನ ಹರ್ ಕೀ ಪೌರಿ ಸಮೀಪದ ಚಂಡಿದ್ವೀಪ ಪ್ರದೇಶದಲ್ಲಿನ ಆಶ್ರಮವೊಂದರಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ 16 ಮಂದಿ ಮೃತರಾಗಿ ಇತರ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಶ್ರಮದ ಸಂಸ್ಥಾಪಕ ಪಂಡಿತ ಶ್ರೀರಾಮ ಶರ್ಮ ಶತಮಾನೋತ್ಸವ ಸಮಾರಂಭದ ಅಂಗವಾಗಿ ಯೋಜಿಸಲಾಗಿದ್ದ ~ಯಜ್ಞ~ದಲ್ಲಿ ಪಾಲ್ಗೊಳ್ಳುವ ಸಲುವಾಗಿ ಶಕ್ತಿಕುಂಜ ಆಶ್ರಮದ ಮಹಾದ್ವಾರದಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಒಳಪ್ರವೇಶಿಸಲು ಯತ್ನಿಸಿದಾಗ ಕಾಲ್ತುಳಿತ ಸಂಭವಿಸಿತು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಪರಿಹಾರ: ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಲ್ತುಳಿತದಿಂದ ಮೃತಪಟ್ಟವರ ಕುಟಂಬಕ್ಕೆ ಒಂದು ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ರೂ. 50 ಸಾವಿರ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ವಾಕ್ತರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.