ಕಲಬುರಗಿ: ‘ಎಸ್ಸಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ, ಎಸ್ಟಿಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ವರ್ಷಗಳೇ ಕಳೆದಿವೆ. ಈ ಹೆಚ್ಚಳದಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ 56ಕ್ಕೆ ಏರಿದೆ. ಅದಕ್ಕೆ ರಕ್ಷಣೆ ನೀಡಲು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ತುರ್ತು ಕ್ರಮವಹಿಸಬೇಕು’ ಎಂದು ಕಾಂಗ್ರೆಸ್ ಮುಖಂಡರೂ ಆಗಿರುವ ವಾಲ್ಮಿಕಿ ಸಮುದಾಯದ ನಾಯಕ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

‘ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಬೇಕು. ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ದು ಒತ್ತಡ ಹೇರಬೇಕು. ಪ್ರಧಾನಿ ಮೋದಿ ಸರ್ಕಾರವೂ ರಾಜ್ಯದ ಮನವಿ ಪುರಸ್ಕರಿಸಿ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಬೇಕು’ ಎಂದು ನಗರದಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಮಾರ್ಚ್ ಅಂತ್ಯದೊಳಗೆ ಈ ಕುರಿತು ಕ್ರಮವಹಿಸದಿದ್ದರೆ, ಏಪ್ರಿಲ್ನಲ್ಲಿ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಲು ಹಿಂದಿನ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಈ ಕಾಯ್ದೆಯನ್ನು ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪಕ್ಷಾತೀತವಾಗಿ ಸರ್ವಾನುಮತದಿಂದ ಅಂಗೀಕರಿಸಿದ್ದರು. ಅದಕ್ಕೆ ರಾಜ್ಯಪಾಲರ ಅಂಕಿತವೂ ಬಿದ್ದಿದೆ. ಆದರೆ, ಸಂವಿಧಾನದ 9ನೇ ಪರಿಚ್ಛೇದ ಸೇರಿಸುವ ಕಡತ ಮೂರು ವರ್ಷಗಳಿಂದ ಕೇಂದ್ರದಲ್ಲಿ ಬಾಕಿ ಉಳಿದಿದೆ’ ಎಂದರು.

‘ರಾಜ್ಯ ಸರ್ಕಾರ ಇದೀಗ 56 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಎಸ್ಸಿಗೆ ಶೇ 17 ಹಾಗೂ ಎಸ್ಟಿಗೆ ಶೇ 7ರಷ್ಟು ಮೀಸಲಾತಿ ಸಿಕ್ಕರೆ ಮಾತ್ರವೇ ಪರಿಶಿಷ್ಟರಿಗೆ ಉದ್ಯೋಗದಲ್ಲಿ ಒಂದಿಷ್ಟು ಸ್ಥಾನಗಳು ಸಿಗಲು ಸಾಧ್ಯ. ಇಲ್ಲದಿದ್ದರೆ ಹುದ್ದೆಗಳು ಕೈತಪ್ಪುತ್ತವೆ. ಹೀಗಾಗಿ ಒಟ್ಟು ಮೀಸಲಾತಿ ಪ್ರಮಾಣ ಶೇ 56ಕ್ಕೆ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಬೇಕಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಎಂ.ನರಸಿಂಹಯ್ಯ, ನಂದಕುಮಾರ ಮಾಲೀಪಾಟೀಲ, ರಾಜಪ್ಪ, ಗುರು ಶ್ರೀರಾಮುಲು, ಹಣಮಂತ್ರಾಯಪ್ಪ, ಶರಣು ಸುಬೇದಾರ, ಮಾರುತಿ ಜಮಾದಾರ, ಮರಿಯಪ್ಪ ನಾಯಕ, ಶ್ರವಣಕುಮಾರ ನಾಯಕ ಇದ್ದರು.

ಪ್ರತಿಭಟನೆ: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆ ರಕ್ಷಣೆ ನೀಡಲು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದಿಂದ ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260310-34-1375786029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.