ಬೆಂಗಳೂರು: ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರವಿದ್ದರೆ ರಾಜ್ಯಕ್ಕೆ ಉಪಕಾರವಾಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ಜನ ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಗುರುವಾರ ಆರಂಭವಾದ ಪಕ್ಷದ ಶಾಸಕರು ಮುಖಂಡರು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಕ್ಕೆ ಒಳಿತಾಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಬೆಳೆಸುವ ನಿಟ್ಟಿನಲ್ಲಿ ನಮ್ಮ ಗುರಿ ಇರಬೇಕು ಎಂದರು.

ಇದೇ ಕಾರ್ಯಕ್ರಮದಲ್ಲಿ ಮೈಸೂರಿನ ನೂತನ ಮೇಯರ್ ತಸ್ಲೀಮಾ ಅವರನ್ನು ಸನ್ಮಾನಿಸಲಾಯಿತು. ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬುದು ಬಿಜೆಪಿ ಘೋಷಣೆ, ಆದರೆ ಅದನ್ನು ನಿಜಕ್ಕೂ ಜಾರಿಗೆ ತಂದಿರುವುದು ಜೆಡಿಎಸ್ ಎಂದು ಮೈಸೂರಿನ ಮೇಯರ್ ತಸ್ಲೀಮಾ ಹೇಳಿದರು.

ನಮ್ಮ ಸರ್ಕಾರ ಇದ್ದಾಗ ಕೊಟ್ಟ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ, ನಮ್ಮ ಪಕ್ಷ ರಚನಾತ್ಮಕವಾಗಿ ಕೆಲಸ ಮಾಡಿದೆ. ಸಾಲ ಮನ್ಬಾ ಸಹಿತ ಹಲವು ಯೋಜನೆಗಳ ಬಗ್ಗೆ ಸರಿಯಾಗಿ ಬಿಂಬಿಸುವಲ್ಲಿ ಸೋತಿದ್ದೇವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್ ಕೆ.ಕುಮಾರಸ್ವಾಮಿ ಹೇಳಿದರು.

ಸಭೆಯಲ್ಲಿ ಜೆಡಿಎಸ್ ಮೂರು ನಿರ್ಣಯ

– ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ

– ನೆರೆ ಪರಿಹಾರ ನೀಡುವಲ್ಲಿ ವಿಫಲವಾಗಿರುವ ರಾಜ್ಯ ಅರ್ಕಾರದ ಕಾರ್ಯವೈಖರಿ ಖಂಡನೆ

– ಆರ್ಥಿಕ ಸ್ಥಿತಿ ಪಾತಾಳಕ್ಕೆ ಕುಸಿದಿದ್ದು, ಅದನ್ನು ಮೇಲೆತ್ತಲು ಪ್ರಯತ್ನಿಸದ ಕೇಂದ್ರ ಸರ್ಕಾರದ ಕಾರ್ಯವೈಖರಿಗೆ ಖಂಡನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.