ಗೌರಿಬಿದನೂರು: ದೇಶದಲ್ಲಿ ಯಾವ ರಾಜರ ಆಳ್ವಿಕೆ ಕಾಲದಲ್ಲಿ ಯಾವ ರೀತಿಯ ನಾಣ್ಯಗಳು ಚಲಾವಣೆಯಲ್ಲಿದ್ದವು ಎನ್ನುವ ಕುರಿತು ವಿದ್ಯಾರ್ಥಿಗಳು ಮಾಹಿತಿ ಪಡೆಯಲು ನ್ಯಾಣ್ಯ ಪ್ರದರ್ಶನ ಸಹಕಾರಿಯಾಗಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಯು.ವಿ.ಚಂದರಗಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಪರಂಪರೆ ಕೂಟದಿಂದ ಮಂಗಳವಾರ ಏರ್ಪಡಿಸಿದ್ದ ಪ್ರಾಚೀನ ಮತ್ತು ಐತಿಹಾಸಿಕ ಮಹತ್ವದ ನಾಣ್ಯಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಲ್ಲಿ ಕೆಲವು ನಾಣ್ಯಗಳ ಬಗ್ಗೆ ಮಾತ್ರ ಕೇಳಿ ತಿಳಿದಿರುತ್ತಾರೆ. ಆದರೆ ಖುದ್ದಾಗಿ ಬಹುತೇಕ ನಾಣ್ಯಗಳನ್ನು ನೋಡಲು ಸಾಧ್ಯವಿರುವುದಿಲ್ಲ. ಇಂತಹ ಪ್ರದರ್ಶನಗಳಿಂದ ವಿದ್ಯಾರ್ಥಿಗಳು ತಿಳಿಯಲು ಅನುಕೂಲವಾಗುತ್ತದೆ ಎಂದರು.

ನಾಣ್ಯ ಪ್ರದರ್ಶನದಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಸಾರ್ವಜನಿಕರಿಗೂ ಅನುಕೂಲವಾಗಲಿದೆ. ಇತಿಹಾಸದ ಬಗ್ಗೆ ತಿಳಿಯಪಡಸುವಂತಹ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸಗಳನ್ನು ವಿದ್ಯಾರ್ಥಿಗಳು ಸಹ ರೂಢಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಪ್ರಾಧ್ಯಾಪಕರಾದ ಗಂಗಾಧರಯ್ಯ, ಶಿವಣ್ಣ, ರಮೇಶ್ ಚಂದ್ರ ದತ್ತ, ಪ್ರವೀಣ್, ಮಧುಸೂಧನರೆಡ್ಡಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಪ್ರದರ್ಶನದಲ್ಲಿ ಪಾಲ್ಗೊಂಡರು.

ಮೌರ್ಯ, ಶಾತವಾಹನ, ವಿಜಯನಗರ ಸಾಮ್ರಾಜ್ಯ, ಮೈಸೂರು ಒಡೆಯರ್, ಗ್ರೀಕರ ಕಾಲ ಹಾಗೂ ಮತ್ತಿತರೆ ಸಣ್ಣ–ಪುಟ್ಟ ರಾಜ ಮನೆತನಗಳ ಕಾಲದಲ್ಲಿ ಚಲಾವಣೆಯಲ್ಲಿದ್ದ 1500ಕ್ಕೂ ಹೆಚ್ಚಿನ ನಾಣ್ಯಗಳನ್ನು ಹವ್ಯಾಸಿ ಸಂಗ್ರಹಕಾರ ಎಚ್.ಕೆ.ರಾಮರಾವ್ ಪ್ರದರ್ಶನಗೊಳಿಸಿದರು. ನಾವು ಕಂಡು, ಕೇಳರಿಯದ ನಾಣ್ಯಗಳು ಇಲ್ಲಿ ಪ್ರದರ್ಶನಗೊಂಡಿವೆ. ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.