ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಕಾರ್ಯದರ್ಶಿಯವರು ನೌಕರರ ಸಮಸ್ಯೆಗಳಿಗೆ ಸ್ಪಂದಿಸದಿರುವುದರಿಂದ 10 ಮಹಾನಗರ ಪಾಲಿಕೆಗಳಲ್ಲಿ ಬುಧವಾರದಿಂದ ಪ್ರತಿಭಟನೆ ಮುಂದುವರಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ನಿರ್ಧರಿಸಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿನ 10 ಮಹಾನಗರ ಪಾಲಿಕೆಗಳ ನೌಕರರು ಮಂಗಳವಾರ ಸಾಮೂಹಿಕ ರಜೆ ಹಾಕಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ದಿನಪೂರ್ತಿ ಪ್ರತಿಭಟನೆ ನಡೆಸಿದರು.

ಮೈಸೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಬೆಳಗಾವಿ, ಕಲಬುರಗಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ವಿಜಯಪುರ ಮಹಾನಗರ ಪಾಲಿಕೆಗಳ ಕಚೇರಿಗಳಲ್ಲೂ ಬಹುತೇಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಿರಲಿಲ್ಲ. ಆಯಾ ಕಚೇರಿಗಳ ಆವರಣದಲ್ಲಿ ನೌಕರರು ಪ್ರತಿಭಟನೆ ನಡೆಸಿದರು.

‘ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಬಂದು ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಆದರೆ, 10 ಮಹಾನಗರ ಪಾಲಿಕೆಗಳಿಗೆ ಸಂಬಂಧಿಸಿದ ನಗರಾಭಿವೃದ್ಧಿ ಇಲಾಖೆಯಿಂದ ಸಚಿವರಾಗಲಿ, ಅಧಿಕಾರಿಗಳಾಗಲಿ ಯಾರೂ ಬರಲಿಲ್ಲ. ಇದರಿಂದ ಪಾಲಿಕೆಗಳ ನೌಕರರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಆಯಾ ಮಹಾನಗರ ಪಾಲಿಕೆಗಳ ಆವರಣದಲ್ಲಿ ಹೋರಾಟ ಮುಂದುವರಿಯಲಿದೆ’ ಎಂದು ಪರಿಷತ್ನ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.

ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ‘ಪೌರಾಡಳಿತ ಇಲಾಖೆಗೆ ಸಂಬಂಧಪಡುವ ಮಹಾನಗರ ಪಾಲಿಕೆಯಲ್ಲಿನ ಸಮಸ್ಯೆ, ಕಷ್ಟಗಳ ಅರಿವು ನಮಗಿದೆ. ಅವುಗಳನ್ನು ಸರಿಪಡಿಸಲು ಸರ್ಕಾರ ಜೊತೆಯಲ್ಲಿ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು. 7ನೇ ವೇತನ ಆಯೋಗ, ವೃಂದ ನೇಮಕಾತಿಗೆ ಮಾರ್ಪಡು ಮಾಡಿ ಮುಂಬಡ್ತಿ ನೀಡಲಾಗುವುದು. ನಿಮ್ಮ ಬೇಡಿಕೆಗಳಲ್ಲಿ ಐದು ಈಡೇರಿಸಲಾಗಿದ್ದು, ಹಣಕಾಸು ಇಲಾಖೆ ಅನುಮೋದನೆ ಕೋರಲಾಗಿದೆ’ ಎಂದರು.

ಪಾಲಿಕೆ ನೌಕರರ ಬೇಡಿಕೆಗಳು

ಸರ್ಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು. ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯವನ್ನು ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು. ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪಾಲಿಕೆ ಸಿಬ್ಬಂದಿಗೆ ನೀಡಬೇಕು. ಪ್ರತಿ ವರ್ಷ ಕ್ರೀಡೆ ಆಯೋಜಿಸಬೇಕು. ವಿವಿಧ ವೃಂದದ ಹುದ್ದೆಗಳಿಗೆ ವೃಂದವಾರು ಮುಂಬಡ್ತಿ ನೀಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.