ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹100 ಕೋಟಿ ಜಪ್ತಿ: ಸಿಬಿಐ ತನಿಖೆಗೆ ಬಿಎಸ್‌ವೈ ಒತ್ತಾಯ

Published 16 ಅಕ್ಟೋಬರ್ 2023, 16:54 IST
Last Updated 16 ಅಕ್ಟೋಬರ್ 2023, 16:54 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ₹100 ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದು ಯಾರಿಗೆ ಸೇರಿದ ಹಣ ಎಂಬುದು ಗೊತ್ತಾಗಬೇಕಾದರೆ ಇಡಿ ಅಥವಾ ಸಿಬಿಐನಿಂದಲೇ ತನಿಖೆ ಆಗಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಬಳಸಲೆಂದೇ ಹಣವನ್ನು ಸಂಗ್ರಹಿಸಿದೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಅದರ ಬದಲು ಅನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮತ್ತು ಲೋಕಸಭೆ ಚುನಾವಣೆಗಾಗಿ ಭಾರಿ ಪ್ರಮಾಣದಲ್ಲಿ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದೆ. ಹೀಗಾಗಿ ಜನರಿಂದಲೇ ಲೂಟಿ ಮಾಡಲಾರಂಭಿಸಿದೆ ಎಂದು ಅವರು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT