ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಅಧಿವೇಶನಕ್ಕೆ 100 ವರ್ಷ ತುಂಬಿದ ನೆನಪಿಗಾಗಿ ರಾಜ್ಯದ 100 ಕಡೆ ಕಾಂಗ್ರೆಸ್ ಭವನ ನಿರ್ಮಿಸಬೇಕೆಂಬ ರಾಹುಲ್ ಗಾಂಧಿ ಸೂಚನೆಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ಶಾಸಕರ ಪಟ್ಟಿಯನ್ನು ವಾರದೊಳಗೆ ನೀಡುವಂತೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಎಲ್ಲ 31 ಜಿಲ್ಲೆಗಳ ವ್ಯಾಪ್ತಿಯಲ್ಲಿ ಜಿಲ್ಲಾಮಟ್ಟ ಅಥವಾ ವಿಧಾನಸಭೆ ಕ್ಷೇತ್ರವಾರು ಸೇರಿ ಒಟ್ಟು 100 ಕಾಂಗ್ರೆಸ್ ಕಚೇರಿಗಳಿಗೆ ಕಟ್ಟಡ ನಿರ್ಮಿಸಲು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಮತ್ತು ಶಾಸಕರಿಗೆ ಎಐಸಿಸಿ ಮತ್ತು ಕೆಪಿಸಿಸಿ ಎರಡು ತಿಂಗಳ ಹಿಂದೆಯೇ ಸೂಚನೆ ನೀಡಿತ್ತು. ಆದರೆ, ಕೆಲವು ಉಸ್ತುವಾರಿ ಸಚಿವರು ಮತ್ತು ಶಾಸಕರು ಈ ವಿಚಾರದಲ್ಲಿ ನಿರಾಸಕ್ತಿ ಹೊಂದಿರುವುದನ್ನು ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಪುನರ್ ಸಂಘಟಿಸಿ ಬಲಿಷ್ಠಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ಕಚೇರಿಗಳನ್ನು ಆರಂಭಿಸಲು ರಾಹುಲ್ ಗಾಂಧಿ ಸೂಚನೆ ನೀಡಿದ್ದರು. ಅದಕ್ಕೆ ಪೂರಕವಾಗಿ ಎಐಸಿಸಿಯಿಂದಲೂ ನಿರ್ದೇಶನ ಬಂದಿತ್ತು. ಈ ವಿಚಾರದಲ್ಲಿ ಜಿಲ್ಲಾಮಟ್ಟದಲ್ಲಿ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಮುತುವರ್ಜಿ ವಹಿಸಬೇಕು. ಸ್ವಂತ ಜಾಗ ಇಲ್ಲದೇ ಇದ್ದರೆ, ನಿವೇಶನ ಮಂಜೂರು ಮಾಡಿಸಿಕೊಂಡು ಕಟ್ಟಡ ನಿರ್ಮಿಸಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ, ಕೆಲವು ಸಚಿವರು ಈ ವಿಚಾರದಲ್ಲಿ ಆಸಕ್ತಿ ತೋರಿಸದೇ ಇರುವುದು ವರಿಷ್ಠರ ಗಮನಕ್ಕೆ ಬಂದಿದೆ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ರಾಜ್ಯ ನಾಯಕರ ಜೊತೆ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಅಲ್ಲದೆ, ವಿಭಾಗವಾರು ಪಕ್ಷದ ಉಸ್ತುವಾರಿ ವಹಿಸಿರುವ ನಾಲ್ವರು ಎಐಸಿಸಿ ಕಾರ್ಯದರ್ಶಿಗಳ ಜೊತೆಯಲ್ಲೂ ಸಮಾಲೋಚನೆ ನಡೆಸಿದ್ದಾರೆ. ಅಧಿಕಾರ, ಸ್ಥಾನಮಾನ ಅನುಭವಿಸುತ್ತಿರುವ ಸಚಿವರು, ಶಾಸಕರು ಪಕ್ಷ ಸಂಘಟನೆ, ಬೆಳವಣಿಗೆಗೆ ನೀಡುವ ಕೊಡುಗೆಗಳ ಬಗ್ಗೆಯೂ ವಿಚಾರ ವಿನಿಮಯ ನಡೆಸಿದ್ದಾರೆ. ಈ ವೇಳೆ ಖರ್ಗೆ, ರಾಜ್ಯದಾದ್ಯಂತ ಪಕ್ಷದ ಕಚೇರಿ ನಿರ್ಮಿಸಬೇಕೆಂಬ ರಾಹುಲ್ ಗಾಂಧಿಯವರ ಅಭಿಲಾಷೆಗೆ ಪೂರಕವಾಗಿ ಯಾವ ಸಚಿವರು ಮತ್ತು ಶಾಸಕರು ಸ್ಪಂದಿಸುತ್ತಿಲ್ಲವೆಂಬ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ಬೆಳಗಾವಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಸಂಭ್ರಮವನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.