ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರಿಗೆ ₹ 10 ಸಾವಿರ ಕೋಟಿ, ರೈತರಿಗೆ ₹ 2 ಸಾವಿರ ಭಿಕ್ಷೆ: ವಿಜಯೇಂದ್ರ

Published 30 ಏಪ್ರಿಲ್ 2024, 19:09 IST
Last Updated 30 ಏಪ್ರಿಲ್ 2024, 19:09 IST
ಅಕ್ಷರ ಗಾತ್ರ

ಕಲಬುರಗಿ: ‘ಅಲ್ಪಸಂಖ್ಯಾತರಿಗಾಗಿ ₹ 10 ಸಾವಿರ ಕೋಟಿ ಮೀಸಲಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರದಿಂದ ತತ್ತರಿಸಿರುವ ರೈತರಿಗೆ ಭಿಕ್ಷೆಯಂತೆ ಕೇವಲ ₹ 2 ಸಾವಿರ ಬೆಳೆ ಪರಿಹಾರ ನೀಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಕಮಲಾಪುರ ಪಟ್ಟಣದಲ್ಲಿ ಮಂಗಳವಾರ ನಡೆದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ನೀತಿಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದರು.

‘ಕಳೆದ ಬಾರಿ ಪ್ರವಾಹದಿಂದ ಬೆಳೆ ಹಾನಿಯಾದವರಿಗೆ ಯಡಿಯೂರಪ್ಪ ಸರ್ಕಾರ ಹೆಕ್ಟೇರ್‌ಗೆ ₹ 24 ಸಾವಿರ ಒದಗಿಸಿತ್ತು. ಗ್ಯಾರಂಟಿ ಹೆಸರಲ್ಲಿ ₹ 2 ಸಾವಿರ ಕೊಡುತ್ತಿರುವ ಸರ್ಕಾರ, 800 ರೈತರ ಆತ್ಮಹತ್ಯೆಗೆ ಪರಿಹಾರ ಒದಗಿಸಿಲ್ಲ. ನಾಲ್ಕು ತಿಂಗಳಿಂದ ಸಂಧ್ಯಾ ಸುರಕ್ಷಾ, ವಿವಿಧ ಪಿಂಚಣಿಗಳಿಗೆ ಹಣ ಬಿಡುಗಡೆ ಮಾಡಿಲ್ಲ. 10 ಕೆ.ಜಿ ಅಕ್ಕಿ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಅದರಲ್ಲಿ 5 ಕೆ.ಜಿ ಕೇಂದ್ರ ಸರ್ಕಾರ ನೀಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ವ್ಯವಸ್ಥೆ ಮಾಡಿ ಪುರುಷರ ಟಿಕೆಟ್‌ ದರವನ್ನು ಶೇ 30ರಷ್ಟು ಹೆಚ್ಚಿಸಿದ್ದಾರೆ. ವಿದ್ಯುತ್‌ ದರ ಹೆಚ್ಚಿಸಿದ್ದಾರೆ. ರೈತರು ಜಮೀನಿನಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಕೇವಲ ₹ 25 ಸಾವಿರ ಇತ್ತು. ಕಾಂಗ್ರೆಸ್ ಸರ್ಕಾರ ಅದನ್ನು ₹ 2 ಲಕ್ಷಕ್ಕೆ ಹೆಚ್ಚಿಸಿದೆ. ಮದ್ಯದ ದರ, ನೋಂದಣಿ ಮುದ್ರಾಂಕ ದರ ಹೆಚ್ಚಿಸಿ ಜನರ ಸುಲಿಗೆ ಮಾಡುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT