ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 11.24 ಕೋಟಿ ಮೌಲ್ಯದ ಸ್ವತ್ತುಗಳ ವಶ

Published 3 ಮೇ 2023, 21:23 IST
Last Updated 3 ಮೇ 2023, 21:23 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಅಕ್ರಮ ತಡೆಗೆ ರಾಜ್ಯದ ವಿವಿಧೆಡೆ ಮಂಗಳವಾರ ನಡೆಸಿದ ಕಾರ್ಯಾಚರಣೆಗಳಲ್ಲಿ ₹ 2.85 ಕೋಟಿ ನಗದು ಸೇರಿದಂತೆ ₹ 11.24 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

‘₹ 1.39 ಕೋಟಿ ಮೌಲ್ಯದ 55,628 ಲೀಟರ್‌ ಮದ್ಯ, ₹ 19.74 ಲಕ್ಷ ಮೌಲ್ಯದ 20.30 ಕೆ.ಜಿ. ಮಾದಕವಸ್ತು, ₹ 6.72 ಕೋಟಿ ಮೌಲ್ಯದ 12.84 ಕೆ.ಜಿ. ಚಿನ್ನ, ₹ 6.68 ಲಕ್ಷ ಮೌಲ್ಯದ 11.60 ಕೆ.ಜಿ. ಬೆಳ್ಳಿ, ₹ 49 ಸಾವಿರ ಮೌಲ್ಯದ ಉಚಿತ ಕೊಡುಗೆಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಮಂಗಳವಾರದವರೆಗೆ ಒಟ್ಟು ₹ 323.09 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಕ್ರಮ ಆರೋಪದಡಿ 2,514 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಬಕಾರಿ ಕಾಯ್ದೆ ಉಲ್ಲಂಘನೆ ಆರೋಪದಡಿ 30,132 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT