ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೋಜೋವಧೆ ಮಾಡುವ ಕೆಲಸ ನಡೆಯುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಈ ರೀತಿ ಮಾನಹಾನಿ ಮಾಡುವುದರ ಹಿಂದೆ ಯಾರಿದ್ದಾರೋ ಗೊತ್ತಿಲ್ಲ. ಆಯ್ಕೆಯಾಗಿರುವ 25 ಸಂಸದರ ಪೈಕಿ 13 ಸಂಸದರು ಕ್ಷೇತ್ರದಲ್ಲಿ ಕೆಲಸ ಮಾಡಿಲ್ಲ ಇನ್ನೂ ಕೆಲ ಸಂಸದರು ಅನಾರೋಗ್ಯ ಪೀಡಿತರಾಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗಲ್ಲ ಎಂಬ ಗೊಂದಲಗಳನ್ನು ಸೃಷ್ಟಿಸಲಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಬಿಜೆಪಿ ಸಂಸದ ಡಿ.ವಿ.ಸದಾನಂದಗೌಡ ಆಗ್ರಹಿಸಿದ್ದಾರೆ.
ಯೂಟ್ಯೂಬ್ ಚಂದಾದಾರರಾಗಿ: / prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947