ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

132 ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳಿಗೆ ನೇಮಕಾತಿ ಆದೇಶ

Published 19 ಸೆಪ್ಟೆಂಬರ್ 2023, 16:26 IST
Last Updated 19 ಸೆಪ್ಟೆಂಬರ್ 2023, 16:26 IST
ಅಕ್ಷರ ಗಾತ್ರ

ಬೆಂಗಳೂರು: ‘132 ಎಪಿಪಿಗಳಿಗೆ (ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌) ನೇಮಕಾತಿ ಆದೇಶ ಕಳುಹಿಸಲಾಗಿದ್ದು, 49 ಎಪಿಪಿಗಳಿಗೆ ಹಿರಿಯ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಹುದ್ದೆಗೆ ಬಡ್ತಿ ನೀಡಲಾಗಿದೆ‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಾದ್ಯಂತ ಖಾಲಿ ಇರುವ ಪಿಪಿಗಳ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮೆಮೊ (ಜ್ಞಾಪನಾ ಪತ್ರ) ಸಲ್ಲಿಸಿ, ‘ಒಟ್ಟು 143 ಎಪಿಪಿಗಳ ಪೈಕಿ ಇದೇ 15ರಂದು 132 ಜನರಿಗೆ ಅಭಿಯೋಜನಾ ಇಲಾಖೆ ವತಿಯಿಂದ ನೇಮಕಾತಿ ಆದೇಶ ರವಾನಿಸಲಾಗಿದೆ. 49 ಜನರನ್ನು ಹಿರಿಯ ಪಿಪಿ ಹುದ್ದೆಗೆ ಬಡ್ತಿ ನೀಡಲಾಗಿದೆ‘ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ‘ಖಾಲಿ ಹುದ್ದೆ ತುಂಬಲು ಸರ್ಕಾರ ಕ್ರಮ ಕೈಗೊಂಡಿದೆ. ದಾಖಲೆ ಪರಿಶೀಲನೆ ಮತ್ತು ಅನ್ಯ ಕಾರಣಗಳಿಗಾಗಿ 143 ಅಭ್ಯರ್ಥಿಗಳ ಪೈಕಿ 11 ಮಂದಿಗೆ ನೇಮಕಾತಿ ಆದೇಶ ನೀಡಲಾಗಿಲ್ಲ ಎಂದು ತಿಳಿಸಿದೆ. ಈ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂಬ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಹೀಗಾಗಿ, ಅಂತಿಮ ವರದಿಯನ್ನು ಮೂರು ವಾರಗಳ ಬಳಿಕ ಸಲ್ಲಿಸಬೇಕು‘ ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT