ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ 15ರಷ್ಟು ಮೀಸಲು ನೀಡುವ ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರ ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಸಂಪುಟ ಉಪಸಮಿತಿ ಶಿಫಾರಸಿಗೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಕೇಂದ್ರದ ಮಾದರಿಯನ್ನೇ ಅನುಸರಿಸಿ ಮೀಸಲಾತಿ ಮರುನಿಗದಿ ಮಾಡಲಾಗಿದೆ ಎಂದಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದಲ್ಲಿ ಬಡ ಕುಟುಂಬಗಳಿವೆ. ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. 2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಸಹ ಶೇ 15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ಸೂಚಿಸಿತ್ತು. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ವಾಸ್ತವಂಶ ರ್ಥಮಾಡಿಕೊಳ್ಳದೆ ವಿರೋಧ ಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿವೆ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.