ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನ ಪರಿಷತ್ ಸದಸ್ಯರಾಗಿ 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Published 24 ಜೂನ್ 2024, 7:08 IST
Last Updated 24 ಜೂನ್ 2024, 7:08 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಮತ್ತು ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾದ ಒಟ್ಟು 17 ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಆಯ್ಕೆಯಾದ ಐವನ್ ಡಿಸೋಜ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಿಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಸಿದ್ದರಾಮಯ್ಯ, ಎ. ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ. ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ. ಧನಂಜಯ್‌ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಬೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಅವರು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT