ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಬಿಲ್: ₹180 ಕೋಟಿ ತೆರಿಗೆ ವಂಚನೆ, ಆರೋಪಿ ಬಂಧನ

Published 18 ಜನವರಿ 2024, 15:33 IST
Last Updated 18 ಜನವರಿ 2024, 15:33 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಕ್ಕೆ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಪಾವತಿಸದಿದ್ದರೂ ಪಾವತಿಸಿದ ತೆರಿಗೆ ಹಿಂಪಡೆಯುವ ಸೌಲಭ್ಯ ಬಳಸಿಕೊಂಡು ನಕಲಿ ಬಿಲ್‌ಗಳ ಮೂಲಕ ₹180 ಕೋಟಿ ವಂಚಿಸಿದ್ದ ಪ್ರಕರಣವನ್ನು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ವಂಚನೆ ಪ್ರಕರಣದ ಪ್ರಮುಖ ಸೂತ್ರಧಾರಿ ಕೇರಳದ ಮೊಹಮ್ಮದ್‌ ಸಿದ್ದಿಕ್‌ ಅವರನ್ನು ಬಂಧಿಸಲಾಗಿದೆ. 

ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ 100ಕ್ಕೂ ಹೆಚ್ಚು ಜಿಎಸ್‌ಟಿ ಬೋಗಸ್‌ ನೋಂದಣಿ ಪ್ರಕರಣಗಳು ಪತ್ತೆಯಾಗಿದ್ದು, ₹1,008 ಕೋಟಿ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಿ, ಹಲವರ ಖಾತೆಗಳಿಗೆ ಮರಳಿ ಜಮೆ ಮಾಡಲಾಗಿತ್ತು.

ವಂಚನೆ ಪ್ರಕರಣ ಪತ್ತೆ ಕಾರ್ಯಾಚರಣೆಯಲ್ಲಿ ರಾಜ್ಯದ 60 ಅಧಿಕಾರಿಗಳು ಭಾಗವಹಿಸಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ತಿಳಿಸಿದ್ದಾರೆ. ಕೇರಳ, ತಮಿಳುನಾಡು ಜಿಎಸ್‌ಟಿ ಅಧಿಕಾರಿಗಳ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT