2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ₹2000ಕೋಟಿ ನೀರಾವರಿ ಕಿಕ್‌ಬ್ಯಾಕ್ ಆರೋಪ ಮಾಡಿದ್ದಾರೆ.ಈಗ ತನಿಖೆ ಯಾಕಿಲ್ಲ? 1/3
ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ @BSYBJP 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು. 2/3
ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ. ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು. 3/3