ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದೆ. ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೆ ಉತ್ತೇಜನ ದೊರೆಯಲಿದೆ ಎಂದೂ ಹೇಳಿದರು.