ಬೆಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಸೆ.15ರಂದು ಹಮ್ಮಿಕೊಂಡಿದ್ದ 2,500 ಕಿ.ಮೀ ಉದ್ದದ ಮಾನವ ಸರಪಳಿ, ಲಂಡನ್‌ನ ‘ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರಿದೆ.
‘ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ನಿಂದ ನೀಡಲಾಗಿರುವ ‘ಪ್ರಮಾಣಪತ್ರ’ದಲ್ಲಿ, ಕರ್ನಾಟಕದ ಬೀದರ್‌ನಿಂದ ಚಾಮರಾಜನಗರದವರೆಗೆ ನಿರ್ಮಿಸಲಾಗಿದ್ದ 2,500 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ 25 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದನ್ನು ‘ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ನ ‘ಪ್ರೀಮಿಯಂ ಎಡಿಷನ್’ಗೆ ಸೇರಿಸಲಾಗಿದೆ ಎಂದು ತಿಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ‘ಪ್ರಮಾಣಪತ್ರ’ ಲಭಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.