ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ವಿವಿಧ ಹಗರಣಗಳ ತನಿಖಾ ವರದಿಗಳನ್ನು ಪರಿಶೀಲಿಸಿ ಸಚಿವ ಸಂಪುಟ ಸಭೆಗೆ ಮಂಡಿಸಲು ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಈ ಕುರಿತು ಸುದ್ದಿಗಾರರಿಗೆ ಮಂಗಳವಾರ ಮಾಹಿತಿ ನೀಡಿದ ಪರಮೇಶ್ವರ, ‘ಕಳೆದ ಸಚಿವ ಸಂಪುಟ ಸಭೆಯಲ್ಲಿ ನನ್ನ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ನಡೆದ 26 ಹಗರಣಗಳನ್ನು ಪಟ್ಟಿ ಮಾಡಲಾಗಿದೆ. ಈ ಹಗರಣಗಳಿಗೆ ಸಂಬಂಧಿಸಿದಂತೆ ಎರಡು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ’ ಎಂದರು.

‘ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ಪರಿಶೀಲಿಸುತ್ತಿದ್ದೇವೆ. ಸಂಪೂರ್ಣ ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ. ಬಿಜೆಪಿಯವರ ವಿಚಾರದಲ್ಲಿ ನಾವು ಮೃದು ಧೋರಣೆ ಹೊಂದಿಲ್ಲ. ದ್ವೇಷದ ರಾಜಕಾರಣ ಮಾಡಬಾರದು ಎಂಬುದು ನಮ್ಮ ಉದ್ದೇಶ. ಬಿಜೆಪಿಯವರು ದ್ವೇಷದ ರಾಜಕಾರಣ ಮುಂದುವರಿಸಿದರೆ, ನಾವೂ ಅದನ್ನೇ ಮಾಡಬೇಕಾಗುತ್ತದೆ’ ಎಂದು ಹೇಳಿದರು.

‘ಆದಷ್ಟು ಬೇಗ ತನಿಖಾ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಪ ಸಮಿತಿಯು ಈಗಾಗಲೇ 26 ಹಗರಣಗಳ ಮಾಹಿತಿ ಸಂಗ್ರಹಿಸಲು ಆರಂಭಿಸಿದೆ. ತನಿಖಾ ಸಂಸ್ಥೆಗಳ ಜೊತೆಗೂ ಪರಮೇಶ್ವರ ಅವರು ಚರ್ಚೆ ನಡೆಸಿದ್ದು, ಪ್ರತಿ ಹಗರಣದ ತನಿಖಾ ವರದಿ ಪಡೆಯಲಾಗುತ್ತಿದೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.