ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದ ಮೂಲಕ 29 ಟನ್‌ ಅಡಿಕೆ ಕಳ್ಳಸಾಗಣೆ ಪತ್ತೆ: ಕೇಂದ್ರ

Published 21 ಡಿಸೆಂಬರ್ 2023, 14:57 IST
Last Updated 21 ಡಿಸೆಂಬರ್ 2023, 14:57 IST
ಅಕ್ಷರ ಗಾತ್ರ

ನವದೆಹಲಿ: ವಿಮಾನ ನಿಲ್ದಾಣಗಳ ಮೂಲಕ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ 16 ಪ್ರಕರಣಗಳನ್ನು ಪತ್ತೆ ಹಚ್ಚಿ 29.48 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ. 

ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲು ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್‌ ಈ ಉತ್ತರ ನೀಡಿದ್ದಾರೆ. 

‘2021–22 ಹಾಗೂ 2022–23ರ ಅವಧಿಯಲ್ಲಿ ಕೇಂದ್ರೀಯ ಪರೋಕ್ಷ ತೆರಿಗೆ ಹಾಗೂ ಸುಂಕ ಮಂಡಳಿಯ ತನಿಖಾ ತಂಡವು ಕಾರ್ಯಾಚರಣೆ ನಡೆಸಿ ₹1.08 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಈ ಆರ್ಥಿಕ ವರ್ಷದಲ್ಲಿ ನವೆಂಬರ್‌ ತಿಂಗಳಿನ ತನಕ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ತನಿಖಾ ತಂಡವು ಅಡಿಕೆಯ ಅಕ್ರಮ ಸಾಗಣೆ ಮೇಲೆ ನಿಗಾ ಇಟ್ಟಿದೆ. ದೇಶದ ರೈತರ ಹಿತ ರಕ್ಷಿಸಲು ಬದ್ಧವಾಗಿದೆ’ ಎಂದು ಅವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT