ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಡಿಸಿಎಂ: ಮಾಧ್ಯಮದವರಿಂದಲೇ ಚರ್ಚೆ- ಸಚಿವ ದಿನೇಶ್ ಗುಂಡೂರಾವ್

Published 22 ಸೆಪ್ಟೆಂಬರ್ 2023, 7:24 IST
Last Updated 22 ಸೆಪ್ಟೆಂಬರ್ 2023, 7:24 IST
ಅಕ್ಷರ ಗಾತ್ರ

ಮೈಸೂರು: ‘ಮತ್ತೆ ಮೂವರು ಉಪ ಮುಖ್ಯಮಂತ್ರಿಗಳನ್ನು ಮಾಡಬೇಕು ಎಂಬ ಬಗ್ಗೆ ಚರ್ಚೆ ಏಕೆ? ಈ ವಿಚಾರದಲ್ಲಿ ನೀವೇ ಚರ್ಚೆ ಮಾಡಿಸುತ್ತಿದ್ದೀರಾ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು ಮೂವರು ಡಿಸಿಎಂ ವಿಚಾರದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದರು.

‘ನಮ್ಮ ರೈತರ ಹಿತ ನಮಗೆ ಮುಖ್ಯ. ಕಾವೇರಿ ನದಿ ನೀರು ವಿಚಾರದಲ್ಲಿ ರಾಜಕೀಯ ಬೇಡ. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಆದರೆ, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಯಲ್ಲಿ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ನಿಪಾ ವೈರಸ್‌ ಪ್ರಕರಣ ವರದಿಯಾಗಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT